ಔರಾದ: ಕಿತ್ತೂರಿನ ರಾಣಿ ಚೆನ್ನಮ್ಮ ಬ್ರೀಟಿಷರ ವಿರುದ್ಧ ಹೋರಾಡುವ ಮೂಲಕ ಶೌರ್ಯ ಮತ್ತು ಸ್ವಾಭಿಮಾನ ಮೆರೆದಿದ್ದಾರೆ ಎಂದು ಪ್ರಾಂಶುಪಾಲ ನವೀಲಕುಮಾರ ಉತ್ಕಾರ್ ಹೇಳಿದರು.
ತಾಲೂಕಿನ ಸಂತಪುರ್ ಸಿದ್ದರಾಮೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆದ ಕಿತ್ತೂರ ರಾಣಿ ಚೆನ್ನಮ್ಮನವರ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಸ್ವಾತಂತ್ರ್ಯ ಹೋರಾಟಗಾರ್ತಿ, ಬ್ರಿಟಿಷರ ವಿರುದ್ಧ ರಣಕಹಳೆ ಮೊಳಗಿಸಿದ, ಅಪ್ರತಿಮ ದೇಶಭಕ್ತೆ, ಕನ್ನಡದ ರಾಣಿ ಕಿತ್ತೂರಿನ ರಾಣಿ ಚೆನ್ನಮ್ಮನವರಾಗಿದ್ದಾರೆ. ಇಡೀ ಮಹಿಳಾ ಕುಲಕ್ಕೆ ರಾಣಿ ಚೆನ್ನಮ್ಮ ಪ್ರೇರಣೆಯಾಗಿದ್ದಾರೆ ಎಂದು ಹೇಳಿದರು.
ಉಪನ್ಯಾಸಕಿ ಅಂಬಿಕಾ ವಿಶ್ವಕರ್ಮ ಮಾತನಾಡಿ, ಮಹಿಳೆ ಮನಸ್ಸು ಮಾಡಿದರೆ, ಎಲ್ಲವನ್ನು ಮೀರಿ ನಿಲ್ಲಬಹುದು. ದತ್ತು ಪುತ್ರರಿಗೆ ಉತ್ತರಾಧಿಕಾರದ ಹಕ್ಕಿಲ್ಲ ಎಂಬ ಬ್ರಿಟಿಷರ ನೀತಿ ವಿರುದ್ಧ ಹೋರಾಡಿದ ಏಕೈಕ ಮಹಿಳೆ ರಾಣಿ ಚೆನ್ನಮ್ಮ ಎಂದು ಹೇಳಿದರು.
ಈ ಸಂದರ್ಭದಲ್ಲಿ ಉಪನ್ಯಾಸಕರಾದ ಶಿವಪುತ್ರ ಧರಣಿ, ಕಲ್ಲಪ್ಪ ಬುಟ್ಟೆ, ವನದೇವಿ ಎಕ್ಕಳೆ, ಅಂಬಿಕಾ ವಿಶ್ವಕರ್ಮ, ಮೀರಾತಾಯಿ ಕಾಂಬಳೆ, ಸುಧಾ ಕೌಟಿಗೆ ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು.