ಔರಾದ: ಬೀದರ್ ಉತ್ಸವ ನಿಮಿತ್ಯ ಡಾ.ಗುರುಪಾದಪ್ಪ ನಾಗಮಾರಪಳ್ಳಿ ಫೌಂಡೇಶನ್ ವತಿಯಿಂದ ನಾಳೆ ಬೀದರನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಆಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಈ ಉದ್ಯೋಗ ಮೇಳದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕರ್ತ ರತ್ನದೀಪ ಕಸ್ತೂರೆ ತಿಳಿಸಿದರು.
ಔರಾದ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಉದ್ಯೋಗ ಮೇಳದ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿ, ಈ ಉದ್ಯೋಗ ಮೇಳದಲ್ಲಿ 80ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಳ್ಳಲಿವೆ. 4000ಕ್ಕೂ ಹೆಚ್ಚು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ನಮ್ಮ ತಾಲೂಕಿನ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಉದ್ಯೋಗ ಮೇಳದ ಪ್ರಯೋಜನ ಪಡೆದುಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ರಾಹುಲ್ ಕಾಂಬಳೆ, ರೋಹಿತ್ ಜಾಧವ ಸೇರಿದಂತೆ ಇತರರಿದ್ದರು