ಔರಾದ: ಸಾಮಾಜಿಕ ಭದ್ರತಾ ಮತ್ತು ಪಿಂಚಣಿ ಯೋಜನೆಯಡಿ ಸೌಲಭ್ಯ ಪಡೆಯಲು ಫಲಾನುಭವಿಗಳ ಆಧಾರ್ ಜನ್ಮ ದಿನಾಂಕದ ಪುರಾವೆಯಾಗಿ ಪರಿಗಣಿಸಲು ಸಾಧ್ಯವಿಲ್ಲ. ಆಧಾರ್ ಮಾಹಿತಿಯನ್ನು ಕಡ್ಡಾಯಗೊಳಿಸಲಾಗಿರುವ ಹಿನ್ನಲೆಯಲ್ಲಿ ಆಧಾರ್ ಮಾಹಿತಿಯನ್ನು ವ್ಯಕ್ತಿಯ ಗುರುತಿನ ಪುರಾವೆಯಾಗಿ ಮಾತ್ರ ಪರಿಗಣಿಸಬೇಕಾಗಿದೆ. ಆಧಾರ್ ಕಾರ್ಡ್‌ನಲ್ಲಿನ ಜನ್ಮ ದಿನಾಂಕದ ಮಾಹಿತಿಯನ್ನು ವಯಸ್ಸಿನ ಪುರಾವೆಯಾಗಿ ಪರಿಗಣಿಸಲು ಸಾಧ್ಯವಿಲ್ಲ. ವಿಶಿಷ್ಟ ಗುರುತಿನ ಪ್ರಾಧಿಕಾರವು ಹೊರಡಿಸಿರುವ ಅಧಿಕೃತ ಜ್ಞಾಪನ ಪತ್ರದಲ್ಲಿ ಹೋರಾಡಿಸಿರುವ ಸೂಚನೆಗಳನ್ನು ಅಳವಡಿಸಿಕೊಳ್ಳಲು ತಮ್ಮ ವ್ಯಾಪ್ತಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಂತಪುರ ನಾಡಕಚೇರಿ ಉಪತಹಸೀಲ್ದಾರ್ ಪ್ರೇಮದಾಸ್ ಬೋರಾಳೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಧಾರ ಕಾರ್ಡ್ ಜನ್ಮ ದಿನಾಂಕದ ಪುರಾವೆಯಲ್ಲ

Photo Credit :
Ravi Mathapati
MANY DROPS MAKE AN OCEAN
Support NewsKarnataka's quality independent journalism with a small contribution.