ಔರಾದ: ಸಚಿವರು ಗ್ರಾಮ ಸಂಚಾರದ ವೇಳೆ ವಿವಿಧ ಕಾರಣಗಳಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಭೇಟಿ ನೀಡಿ ವೈಯಕ್ತಿಕ ಧನಸಹಾಯ ಮಾಡಿದರು.
ಡೋಣಗಾಂವ್(ಎಂ) ಗ್ರಾಮದಲ್ಲಿ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿರುವ ಗುರುನಾಥ ಸೂರ್ಯವಂಶಿ ಅವರ ಮನೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರಲ್ಲದೇ ಚಿಕಿತ್ಸೆ ಖರ್ಚಿಗಾಗಿ ವೈಯಕ್ತಿಕ ಧನಸಹಾಯ ಮಾಡಿದರು. ಚಿಕಿತ್ಸೆ ವೆಚ್ಚದ ದಾಖಲಾತಿಗಳನ್ನು ನೀಡಿದಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದಲೂ ನೆರವು ಒದಗಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.
ಸಂಗಮ ಗ್ರಾಮದಲ್ಲಿ ಇತ್ತೀಚೆಗೆ ಹೃದಯಾಘಾತದಿಂದ ಮರಣ ಹೊಂದಿದ ಬಸವರಾಜ ಮುತ್ತಂಗೆ, ಬಳತ್(ಕೆ)ನಲ್ಲಿ ಆಕಸ್ಮಿಕವಾಗಿ ಸಾವನಪ್ಪಿದ ನಾಗನಾಥ ಬಿರಾದಾರ ಹಾಗೂ ನಾಮದೇವ ಅವರ ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರಲ್ಲದೇ ವೈಯಕ್ತಿಕ ನೆರವು ನೀಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ಶಿವಾಜಿರಾವ ಕಾಳೆ, ರಂಗರಾವ ಜಾಧವ, ವಸಂತ ಬಿರಾದಾರ, ದೊಂಡಿಬಾ ನರೋಟೆ, ರಾಮಶೆಟ್ಟಿ ಪನ್ನಾಳೆ, ನಾಗಶೆಟ್ಟಿ ಗಾದಗೆ, ಎಂ.ಡಿ ನಯೂಮ್, ವಿಜಯಕುಮಾರ ದೇಶಮುಖ, ಧನರಾಜ ವಡೆಯರ್, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.