ಔರಾದ: ಮುಂಗನಾಳ- ಬೆಳಕುಣಿ ಮಾರ್ಗದ ರಸ್ತೆಯು ಕಳೆದ ಹಲವಾರು ವರ್ಷಗಳಿಂದಲೂ ಹದಗೆಟ್ಟಿದ್ದರೂ ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಸೇರಿದಂತೆ ಅಧಿಕಾರಿಗಳು ಕಂಡು ಕಾಣದಂತೆ ಮೌನಕ್ಕೆ ಶರಣಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಗ್ರಾಮದ ನಿವಾಸಿ ಅರವಿಂದ್ ಮಲ್ಲಿಗೆ ಮಾತನಾಡಿ, ಈಗಾಗಲೇ ಔರಾದ ನಿಂದ ಮುಂಗನಾಳವರೆಗೆ ರಸ್ತೆ ಕಾಮಗಾರಿಯಾಗಿದೆ. ಆದರೆ ಮುಂಗನಾಳನಿಂದ ಬೆಳಕುಣಿ ವರಿಗೆ ರಸ್ತೆ ಮೇಲೆ ದೊಡ್ಡ ಹೊಂಡಗಳು ಬಿದ್ದಿದ್ದು, ಇದರಿಂದ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುತ್ತಿದೆ. ಶಾಲಾ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ನಿತ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಈ ರಸ್ತೆ ದುರಸ್ತಿ ಮಾಡಿ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ.