ಔರಾದ: ಪಟ್ಟಣದಲ್ಲಿ ಸುಭಾಸ್ ಚಂದ್ರ ಭೋಸ್ ಯುವಕ ಸಂಘದ ವತಿಯಿಂದ ವಿಶ್ವಗುರು ಬಸವಣ್ಣನವರ ಜಯಂತಿ ಅಂಗವಾಗಿ ಮನೆ ಮನೆಗೆ ಬಸವ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಶರಣ ಸುನಿಲ ಜೀರೋಬೆ ಮತ್ತು ಶರಣಪ್ಪಾ ಪಾಟೀಲರವರು ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಸಂಘದ ಅಧ್ಯಕ್ಷ ರತ್ನದೀಪ ಕಸ್ತೂರೆ ಮಾತನಾಡಿ, ವಚನಗಳ ಮುಖಾಂತರ ಸಾಮಾಜಿಕ ಕ್ರಾಂತಿ ಮಾಡಿದ ಮಹಾಮಾನವತಾವಾದಿ ಜಗಜ್ಯೋತಿ ಬಸವವಣ್ಣನವರು ಅವರ ವಿಚಾರಗಳನ್ನು ಪ್ರತಿ ಮನೆ ಮನೆಗೆ ಮುಟ್ಟಿಸುವುದು ನಮ್ಮ ಉದ್ದೇಶವಾಗಿದೆ ಬಸವಣ್ಣನವರ ವಿಚಾರಧಾರೆಗಳನ್ನು ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಶರಣ ಸುನಿಲ್ ಮಿತ್ರಾ, ಸಂಗು ದ್ಯಾಡೆ, ಚಂದು ಡಿಕೆ, ಲಕ್ಷ್ಮೀಕಾಂತ ಖೆರ್ಡ್ ಉಪಸ್ಥಿತರಿದ್ದರು.