ಔರಾದ: ಬೀದರ ಜಿಲ್ಲೆಯ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದ್ದು, ಈ ಬಗ್ಗೆ ಉನ್ನತ ಮಟ್ಟದ ಸಮಗ್ರ ತನಿಖೆ ನಡೆಸಬೇಕೆಂದು ಸಮಾಜ ಸೇವಕ ಗುರುನಾಥ ವಡ್ಡೆ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ.
ಬೀದರ ಜಿಲ್ಲೆಯ ಪಂಚಾಯತ್ ರಾಜ್ ಇಂಜಿನೀಯರಿಂಗ್ ಇಲಾಖೆ, ಬೀದರ ವಿಭಾಗದಿಂದ ನಡೆಯುತ್ತಿರುವ ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಹಾಗೂ ಟೆಂಡರ್ ಪ್ರಕ್ರಿಯೆ ನಡೆಸುವಲ್ಲಿ ಪಾರದರ್ಶಕತೆ ಕಾನೂನಿನ ಹಾಗೂ ನಿಯಮಗಳ ಉಲ್ಲಂಘನೆ ನಡೆಯುತ್ತಿದೆ. ಸರ್ಕಾರದಿಂದ ಪಂಚಾಯತ್ ರಾಜ್ ಇಂಜಿನೀಯರಿಂಗ್ ಇಲಾಖೆ, ಬೀದರ ವಿಭಾಗದಿಂದ ನಡೆಯುತ್ತಿರುವ ಎಲ್ಲಾ ಕಾಮಗಾರಿಗಳ ಹಾಗೂ ಟೆಂಡರ್‌ಗಳಲ್ಲಿನ ಭ್ರಷ್ಟಾಚಾರ ಉನ್ನತ ಮಟ್ಟದ ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.