ಔರಾದ : ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಹುತಾತ್ಮರ ಆದರ್ಶ ಇಂದಿನ ಯುವಕರಿಗೆ ಪ್ರೇರಣೆಯಾಗಬೇಕು ಎಂದು ನಿವೃತ್ತ ಯೋಧ ಅರುಣ ಮೊಕಾಶಿ ಸಲಹೆ ನೀಡಿದರು.
ತಾಲೂಕಿನ ಸಂತಪೂರ ಸಿದ್ದರಾಮೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಹುತಾತ್ಮರ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಭಗತ್ ಸಿಂಗ್, ಸುಖದೇವ್, ರಾಜಗುರು ಅವರಿಗೆ ಇಡೀ ದೇಶವೇ ಗೌರವ ಕೊಡಬೇಕು. ನಮ್ಮ ಮಕ್ಕಳಿಗೆ ಅವರಲ್ಲಿರುವ ದೇಶಪ್ರೇಮ ಸೇವಾ ಮನೋಭಾವ ತಿಳಿಸಬೇಕು. ಯುವಕರು ಒಂದಿಷ್ಟು ದೇಶ ಸೇವೆ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಪ್ರಾಂಶುಪಾಲ್ ನವೀಲಕುಮಾರ ಉತ್ಕಾರ್ ಮಾತನಾಡಿ, ಹುತಾತ್ಮರಾದ ಭಗತ್ ಸಿಂಗ್, ರಾಜಗುರು, ಸುಖದೇವ್ ರವರು ನಮ್ಮ ದೇಶದ ಸಂಪತ್ತು. ವಿದ್ಯಾರ್ಥಿಗಳು ಇವರ ಆದರ್ಶಗಳನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದರು. ಇದೇ ಸಂದರ್ಭದಲ್ಲಿ ಹುತಾತ್ಮರ ಆತ್ಮಕ್ಕೆ ಶಾಂತಿ ಸಿಗಲೆಂದು ಮೇಣದಬತ್ತಿ ಹಚ್ಚಿ ನಮನ ಸಲ್ಲಿಸಲಾಯಿತು. ಈ ವೇಳೆ ಉತ್ತಮಕುಮಾರ್ ಪವಾರ್, ಉಪನ್ಯಾಸಕರಾದ ಅಂಬಿಕಾ ವಿಶ್ವಕರ್ಮ, ವನದೇವಿ ಎಕ್ಕಳೆ, ಸುರೇಖಾ ದಡ್ಡೆ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.