ಔರಾದ: ಪಶು ಸಂಗೋಪನೆ ಸಚಿವ ಪ್ರಭು.ಬಿ ಚವ್ಹಾಣ ಔರಾದ ವಿಧಾನಸಭಾ ಕ್ಷೇತ್ರದ ಖೇರ್ಡಾ ಹಾಗೂ ಸೋನಾಳ ಗ್ರಾಮದಲ್ಲಿ ಸಂಚರಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.
ಖೇರ್ಡಾ ಗ್ರಾಮದಲ್ಲಿ ನಡೆಯುತ್ತಿದ್ದ ಚರಂಡಿ ಮತ್ತು ಸಿಡಿ ಕಾಮಗಾರಿಯ ಸ್ಥಳಕ್ಕೆ ದಿಢೀರ್ ಭೇಟಿ ನೀಡಿ ಕೆಲಸದ ಗುಣಮಟ್ಟವನ್ನು ವೀಕ್ಷಿಸಿದರು. ಸಂಬಂಧಿಸಿದ ಅಧಿಕಾರಿಯನ್ನು ದೂರವಾಣಿ ಮೂಲಕ ಸಂಪರ್ಕಿಸಿ ಕೆಲಸ ನಿಗದಿತ ಅವಧಿಯೊಳಗಾಗಿ ಪೂರ್ಣಗೊಳಿಸಬೇಕು. ಗುಣಮಟ್ಟದಿಂದ ಕೂಡಿರಬೇಕು. ಇಲಾಖೆ ಅಧಿಕಾರಿಗಳು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕೆಲಸ ಸರಿಯಾಗಿ ಆಗುವಂತೆ ನೋಡಿಕೊಳ್ಳಬೇಕೆಂದು ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ಶಿವಾಜಿ ಪಾಟೀಲ ಮುಂಗನಾಳ, ದೋಂಡಿಬಾ ನರೋಟೆ, ಅನೀಲ ಬಿರಾದಾರ, ಪ್ರತೀಕ್ ಚವ್ಹಾಣ, ಅಮಿತ್ ರಾಠೋಡ, ಸಚಿನ ರಾಠೋಡ, ಧನಾಜಿ ರಾಠೋಡ ಸೇರಿದಂತೆ ಇತರರು ಉಪಸ್ಥಿತರಿದ್ದರು.