ಔರಾದ: ಬಣ್ಣಗಳ ಹಬ್ಬವಾದ ಹೋಳಿ ಹಬ್ಬದಲ್ಲಿ ಸುರಕ್ಷತೆಗೆ ಗಮನ ಹರಿಸಬೇಕು ಎಂದು ಪಶು ಸಂಗೋಪನೆ ಸಚಿವ ಪ್ರಭು.ಬಿ ಚವ್ಹಾಣ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಚಿವರು, ಭಾರತದಲ್ಲಿ ಹೋಳಿ ಹಬ್ಬಕ್ಕೆ ಮಹತ್ವದ ಸ್ಥಾನವಿದೆ. ಕೆಡುಕಿನ ಮೇಲೆ ಒಳಿತಿನ ವಿಜಯದ ಸಂಕೇತವಾಗಿ ಹೋಳಿ ಹಬ್ಬವನ್ನು ಆಚರಿಸಲಾಗುತ್ತದೆ ಎಂದಿದ್ದಾರೆ.
ವಿಷಪೂರಿತ ರಾಸಾಯನಿಕ ಅಂಶಗಳಿರುವ ಬಣ್ಣಗಳ ಬಳಕೆಯಿಂದ ಚರ್ಮ, ಕಣ್ಣಿನ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುತ್ತದೆ, ಹಾಗಾಗಿ ಹೋಳಿ ಹಬ್ಬದ ಸಂಭ್ರಮದಲ್ಲಿ ಆದಷ್ಟು ನೈಸರ್ಗಿಕ ಮತ್ತು ಸುರಕ್ಷಿತ ಎಂದು ಪ್ರಮಾಣಿಸಲ್ಪಟ್ಟ ಬಣ್ಣಗಳ ಬಳಕೆಗೆ ಆದ್ಯತೆ ನೀಡಬೇಕೆಂದು ಸಲಹೆ ನೀಡಿದ್ದಾರೆ.
ಹಬ್ಬದ ಸಂಭ್ರಮದಲ್ಲಿ ಯಾರಿಗೂ ಒತ್ತಾಯಪೂರ್ವಕವಾಗಿ ಬಣ್ಣ ಎರಚದೇ ಹಬ್ವವನ್ನು ಶಾಂತಿ, ಸೌಹಾರ್ದಯುತವಾಗಿ ಆಚರಿಸಬೇಕು. ಬಣ್ಣಗಳ ಹಬ್ಬ ನಾಡಿಗೆ ಸಮೃದ್ಧಿ ತರಲಿ ಎಂದು ಸಚಿವರು ಶುಭ ಕೋರಿದ್ದಾರೆ.