ಔರಾದ: ನಾವು ನಮ್ಮ ಪರಿಸರ ಉಳಿಸಬೇಕಾದರೆ ಶ್ರಮದಾನ ಶಿಬಿರದಲ್ಲಿ ಭಾಗವಹಿಸಿ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸಬೇಕು ಎಂದು ಹಿರಿಯ ಸಾಹಿತಿ ಬಸವರಾಜ ಸ್ವಾಮಿ ತಿಳಿಸಿದರು.
ಔರಾದ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನೆಹರೂ ಯುವ ಕೇಂದ್ರ ಬೀದರ್, ಸುಭಾಷ್ ಚಂದ್ರ ಬೋಸ್ ಯುವಕ ಸಂಘ ಔರಾದ ವತಿಯಿಂದ ನಡೆದ ಶ್ರಮದಾನ ಶಿಬಿರ ಉದ್ಘಾಟನೆ ಹಾಗೂ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮ ದಲ್ಲಿ ಮಾತನಾಡಿದ ಅವರು, ಯುವಕರು ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಪ್ರಾಂಶುಪಾಲ ಓಂಪ್ರಕಾಶ್ ದಡ್ಡೆ ಮಾತನಾಡಿ, ಶ್ರಮದಾನ ಶಿಬಿರ ಮೂರು ದಿವಸಗಳ ಕಾಲ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾಗಿದ್ದು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಯುವಕರು ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಸಿಬೇಕು ಎಂದರು.ಈ ಸಂದರ್ಭದಲ್ಲಿ ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಅನೀಲ್ ಕುಮಾರ್ ಮೇಲದೊಡ್ಡಿ, ಪ.ಪಂ. ಅಧಿಕಾರಿ ಶಾಮ್ ಕುಮಾರ್, ರಾಹುಲ್ ಜಾಧವ ಉಪಸ್ಥಿತರಿದ್ದರು.