ಔರಾದ: ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಚಿವ ಪ್ರಭು.ಬಿ ಚವ್ಹಾಣ ಅವರು ಮೇ 10ರಂದು ಕುಟುಂಬದ ಸದಸ್ಯರೊಂದಿಗೆ ಬೋಂತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡದಲ್ಲಿ ಸ್ಥಾಪಿಸಿರುವ ಮತಗಟ್ಟೆಗೆ ತೆರಳಿ ಮತದಾನದ ಹಕ್ಕನ್ನು ಚಲಾಯಿಸಿದರು.
ಬಳಿಕ ಮಾತನಾಡಿದ ಅವರು, ನನ್ನ ಸ್ವಂತ ಊರಾದ ಬೋಂತಿ ಮತಗಟ್ಟೆಯಲ್ಲಿ ಮತಹಕ್ಕನ್ನು ಚಲಾಯಿಸಿದ್ದು ತುಂಬಾ ಸಂತೋಷವಾಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನಕ್ಕೆ ಅತ್ಯಂತ ಮಹತ್ವದ ಸ್ಥಾನವಿದೆ. ಸಂವಿಧಾನದ ರಕ್ಷಣೆಗಾಗಿ ಅರ್ಹರೆಲ್ಲರೂ ತಮ್ಮ ಹತ್ತಿರದ ಮತಗಟ್ಟೆಗೆ ತೆರಳಿ ತಪ್ಪದೇ ಮತದಾನ ಮಾಡಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.