News Karnataka
ಸಿಟಿಜನ್ ಕಾರ್ನರ್

ಸಚಿವ ಪ್ರಭು ಚವ್ಹಾಣರಿಂದ ಮಹಿಳಾ ಸ್ವ-ಸಹಾಯ ಸಂಘಗಳಿಗೆ ಚೆಕ್ ವಿತರಣೆ

Minister Prabhu Chavan distributes cheques to women self-help groups
Photo Credit : Ravi Mathapati

ಔರಾದ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಔರಾದ ಪಟ್ಟಣದ ಡಾ.ಗುರುಪಾದಪ್ಪ ನಾಗಮಾರಪಳ್ಳಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ತಾಲ್ಲೂಕು ಸ್ತ್ರೀಶಕ್ತಿ ಒಕ್ಕೂಟದ ಕಾರ್ಯಾಗಾರದಲ್ಲಿ ಪಶು ಸಂಗೋಪನೆ ಸಚಿವ ಪ್ರಭು.ಬಿ ಚವ್ಹಾಣ ಅಮೃತ ಯೋಜನೆಯಡಿ 70 ಮಹಿಳಾ ಸ್ವ-ಸಹಾಯ ಸಂಘಗಳಿಗೆ ಸಹಾಯಧನದ ಚೆಕ್ಕುಗಳನ್ನು ವಿತರಿಸಿದರು.

ಬಳಿಕ ಮಾತನಾಡಿದ ಸಚಿವರು, ಮಹಿಳೆಯರು ಕೂಡ ಆರ್ಥಿಕವಾಗಿ ಸಬಲರಾಗಿ ಸ್ವವಾಲಂಬಿ ಜೀವನ ಸಾಗಿಸಬೇಕು ಎಂಬ ಉದ್ದೇಶದಿಂದ ಸರ್ಕಾರವು ನಾನಾ ಯೋಜನೆಗಳನ್ನು ಜಾರಿಗೊಳಿಸಿದೆ. ಕಿರು ಉದ್ದಿಮೆಗಳನ್ನು ಕೈಗೊಂಡು ಆರ್ಥಿಕವಾಗಿ ಸಶಕ್ತರಾಗುವಂತೆ ಮಾಡಲು ಸರ್ಕಾರ ಸ್ತ್ರೀಶಕ್ತಿ ಸ್ವ-ಸಹಾಯ ಸಂಘಗಳಿಗೆ 1 ಲಕ್ಷ ಆರ್ಥಿಕ ಸಹಾಯ ಮಾಡುವ ಜೊತೆಗೆ ತರಬೇತಿ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಇದರ ಸದುಪಯೋಗ ಪಡೆಯಬೇಕು ಎಂದರು.

ಪ್ರಸ್ತುತ ದಿನಮಾನಗಳಲ್ಲಿ ಮಹಿಳೆಯರು ಹೆಚ್ಚು ಜವಾಬ್ದಾರಿಗಳನ್ನು ವಹಿಸಿಕೊಳ್ಳುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಎಲ್ಲ ಮಹಿಳೆಯರೂ ಆರ್ಥಿಕವಾಗಿ ಸಬಲರಾಗಬೇಕಿದೆ. ಈ ದಿಶೆಯಲ್ಲಿ ಸರ್ಕಾರ ನಿರಂತರ ಪ್ರಯತ್ನಿಸುತ್ತಿದೆ. ಸರ್ಕಾರದ ಯೋಜನೆಗಳ ಕುರಿತು ಪ್ರತಿಯೊಬ್ಬರಲ್ಲಿಯೂ ಜಾಗೃತಿ ಮೂಡಿಸುವ ಮೂಲಕ ಸರ್ಕಾರದ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಸರ್ಕಾರದ ಆಶಯವನ್ನು ಸಾಕಾರಗೊಳಿಸಲು ಮಹಿಳೆಯರು ಕೈ ಜೋಡಿಸಬೇಕು ಎಂದು ಮನವಿ ಮಾಡಿದರು. ಇದೇ ವೇಳೆ ಭಾಗ್ಯಲಕ್ಷ್ಮೀ ಯೋಜನೆಯ ಬಾಂಡ್‌ಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ತಹಸೀಲ್ದಾರ ಮಲ್ಲಿಕಾರ್ಜುನ, ತಾಲ್ಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಸುರೇಶ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಭೀಮಸೇನ ಚವ್ಹಾಣ, ತಾಲ್ಲೂಕು ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷರಾದ ಕಾವೇರಿ, ಮುಖಂಡರಾದ ದೊಂಡಿಬಾ ನರೋಟೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಮುಖಂಡರು ಹಾಗೂ ಮಹಿಳಾ ಸ್ವ-ಸಹಾಯ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು

Ravi Mathapati

Read More Articles
MANY DROPS MAKE AN OCEAN
Support NewsKarnataka's quality independent journalism with a small contribution.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *