News Karnataka
ಸಿಟಿಜನ್ ಕಾರ್ನರ್

ಹೆದ್ದಾರಿ ಕಾಮಗಾರಿ ತನಿಖೆಗೆ ವಡ್ಡೆ ಮನವಿ

Vadde demands probe into highway works
Photo Credit : Ravi Mathapati

ಔರಾದ: ಔರಾದ – ಬೀದರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಸಮಗ್ರ ತನಿಖೆ ನಡೆಸಲು ಕೋರಿ ಸಮಾಜ ಸೇವಕ ಗುರುನಾಥ ವಡ್ಡೆಯವರು ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ ಗಡ್ಕರಿ ಇವರಿಗೆ ಬೀದರ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಸಲ್ಲಿಸಿರು.

ಔರಾದದಿಂದ ಬೀದರವರೆಗಿನ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 161 (ಎ) ಭಾರತ ಮಾಲಾ ಯೋಜನೆಯಲ್ಲಿ ಕಾಮಗಾರಿ ನಡೆಯುತ್ತಿದ್ದು, ಸದರಿ ಕಾಮಗಾರಿಯನ್ನು ತೃಪ್ತಿಕರವಾಗಿ ನಡೆಯುತ್ತಿಲ್ಲ ಎಂದು ಈ ಭಾಗದ ಸಾರ್ವ ಜನಿಕರು, ಸಂಘ-ಸಂಸ್ಥೆಗಳು, ಜನ ಪ್ರತಿನಿಧಿಗಳು, ಸರ್ಕಾರದಲ್ಲಿನ ಸಚಿವರು ಅತೃಪ್ತಿ ವ್ಯಕ್ತಪಡಿಸಿರುತ್ತಾರೆ. ಔರಾದದಿಂದ ಬೀದರವರೆಗೆ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ: 161ಎ ನಿರ್ಮಾಣವು ಎನ್.ಎಸ್.ಎ.ಐ.ದಿಂದ ನಿರ್ಮಾಣ ಮಾಡಲಾಗುತ್ತಿದೆ. ಆದರೆ ಸದರಿ ಕಾಮಗಾರಿ ಗುಣಮಟ್ಟದಿಂದ ನಡೆಯುತ್ತಿಲ್ಲ ಹಾಗೂ ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಪಾಲಿಸಬೇಕಾದ ಮಾನಕಗಳ ಪಾಲನೆಯಾಗುತ್ತಿಲ್ಲ ಹಾಗೂ ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್‌ಗಳ ಆದೇಶ, ನಿರ್ದೇಶನಗಳ ಪಾಲನೆ ಆಗುತ್ತಿಲ್ಲ ಎಂಬುದರ ಬಗ್ಗೆ ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಆದ್ದರಿಂದ ಔರಾದ-ಬೀದರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಉನ್ನತ ಮಟ್ಟದ ಸಮಗ್ರ ತನಿಖೆ ನಡೆಸಬೇಕೆಂದು ಸಮಾಜ ಸೇವಕ ಗುರುನಾಥ ವಡ್ಡೆಯವರು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

Ravi Mathapati

Read More Articles
MANY DROPS MAKE AN OCEAN
Support NewsKarnataka's quality independent journalism with a small contribution.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *