ಔರಾದ: ಸಾಲಬಾಧೆ ತಾಳಲಾರದೆ ರೈತನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಔರಾದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಡಗಾಪೂರ ಗ್ರಾಮದಲ್ಲಿ ನಡೆದಿದೆ.
ನಾಗಪ್ಪ ಹಲಗೆ (43) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಇವರು ಪಿಕೆಪಿಎಸ್ ಸೇರಿದಂತೆ ವಿವಿಧ ಬ್ಯಾಂಕ್‌ಗಳಲ್ಲಿ 2 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದರು. ಸಾಲ ಮರುಪಾವತಿ ಮಾಡಲಾಗದೆ ಮನನೊಂದು ತನ್ನ ಜಮೀನಿನ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಯ ತಿಳಿದು ಠಾಣಾ ಕುಸುನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಠಾಣಾ ಕುಸುನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಹಾಯವಾಣಿಗೆ ಕರೆ ಮಾಡಿ:
ಕರಾಳ ಸಮಯವನ್ನು ಎದುರಿಸುತ್ತಿರುವವರು ಮತ್ತು ಯಾರೊಂದಿಗಾದರೂ ಮಾತನಾಡಬೇಕಾದವರಿಗೆ, ದಯವಿಟ್ಟು ಸುಶೆಗ್ ಚಾರಿಟೇಬಲ್ ಟ್ರಸ್ಟ್‌ಗೆ 0824-2983444 ಅಥವಾ ಸಹಾಯವಾಣಿ 080-25497777 ಗೆ ಕರೆ ಮಾಡಿ. ಏಕೆಂದರೆ ನಿಮ್ಮ ಜೀವನವು ಮುಖ್ಯವಾಗಿದೆ.