ಔರಾದ: ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಇನ್ನು ಮುಂದೆ ಪ್ರತಿ ವರ್ಷ ಫಾಲ್ಗುಣ ಶುದ್ಧ ತ್ರಯೋದಶಿಯಂದು ರಾಜ್ಯಾದ್ಯಂತ ಸರ್ಕಾರದ ವತಿಯಿಂದ ಆಚರಿಸುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದ್ದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಆದೇಶ ಹೊರಡಿಸಿದ್ದು ವೀರಶೈವ ಸಮಾಜ ಸ್ವಾಗತಿಸುತ್ತದೆ ಎಂದು ಬೇಡ ಜಂಗಮ ಸಮಾಜದ ಮುಖಂಡರು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ನಗರಾಧ್ಯಕ್ಷ ಅಮರಸ್ವಾಮಿ ಸ್ಥಾವರಮಠ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ರೇಣುಕಾಚಾರ್ಯ ಅವರು ತಮ್ಮ ಸಿದ್ಧಾಂತ ಶಿಖಾಮಣಿಯಂತಹ ಮಹಾನ್ ಗೃಂಥವನ್ನು ನಮಗೆ ಕೊಡುಗೆಯಾಗಿ ನೀಡಿ, ಸಾಮರಸ್ಯ, ಸಹಬಾಳ್ವೆ, ಸೌಹರ್ದತೆ ಬದುಕನ್ನು ಅವರು ನಮಗೆ ಬೋಧಿಸಿದ್ದಾರೆ. ಭಾರತದಾದ್ಯಂತ ಕೋಟ್ಯಾಂತರ ಭಕ್ತ ಸಮೂಹ ಹೊಂದಿದ್ದಾರೆ, ಇಂತಹ ಮಹಾನ್ ಚೇತನರ ಜಯಂತಿಯನ್ನು ಪ್ರತಿ ವರ್ಷ ಫಾಲ್ಗುಣ ಶುದ್ಧ ತ್ರಯೋದಶಿಯಂದು ಆಚರಿಸಲು ರಾಜ್ಯ ಸರ್ಕಾರ ಅವಕಾಶ ಮಾಡಿಕೊಟ್ಟಿದ್ದು ವೀರಶೈವ ಸಮಾಜ ಸ್ವಾಗತಿಸುತ್ತದೆ. ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಿಸಲು ಸರ್ಕಾರ ಆದೇಶ ಹೊರಡಿಸಿರುವುದಕ್ಕೆ ವೀರಶೈವ ಹಾಗೂ ಬೇಡ ಜಂಗಮ ಸಮಾಜದ ಜನರಿಗೆ ಸಂತಸವಾಗಿದೆ. ಸಮಾಜಕ್ಕಾಗಿ, ಧರ್ಮಕ್ಕಾಗಿ ತಮ್ಮ ಜೀವನವನ್ನೇ ಸವೆಸಿದ ರೇಣುಕಾಚಾರ್ಯ ಜಯಂತಿ ಆಚರಿಸಲು ಆದೇಶ ಹೊರಡಿಸಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆಯನ್ನು ತಿಳಿಸಿದ್ದಾರೆ.