ಔರಾದ: ಹೊಲದಲ್ಲಿ ಕೆಲಸ ಮಾಡುತಿದ್ದ ವೇಳೆ ಹಾವು ಕಡಿದು ರೈತನೋರ್ವ ಸಾವನ್ನಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಔರಾದ ತಾಲೂಕಿನ ಜೋನ್ನೇಕೆರಿ ಗ್ರಾಮದ ಶಿವರಾಜ್ .ಎಮ್ ದಾಬಕೆ ವಯಸ್ಸು (55) ಮೃತ ದುರ್ದೈವಿ. ರೈತ ಶಿವರಾಜ ಎನ್ನುವವರು ಜನೆವರಿ 6ರಂದು ಹೊಲದಲ್ಲಿ ಕೆಲಸ ಮಾಡುವಾಗ ಹಾವು ಕಡಿದಿದೆ. ಹೆಚ್ಚಿನ ಚಿಕಿತ್ಸೆಗಾಗಿ ಮಹಾರಾಷ್ಟ್ರದ ಸೋಲಾಪುರದ ಯಶೋಧರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇವರ ದೇಹ ಚಿಕಿತ್ಸೆಗೆ ಸ್ಪಂದಿಸಿಲ್ಲ ಎನ್ನುವ ಕಾರಣಕ್ಕೆ 15 ದಿನಗಳ ಕೆಳಗೆ ಬೀದರ್‌ನ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ 45 ದಿನಗಳ ನಂತರ ಬ್ರಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಕುರಿತು ಸಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.