ಔರಾದ: ಪಶು ಸಂಗೋಪನೆ ಸಚಿವ ಪ್ರಭು.ಬಿ ಚವ್ಹಾಣ ಅವರು ವಿಕಲಚೇತನರ ಯೋಜನೆಯ ಫಲಾನುಭವಿಗಳಿಗೆ ಎಲೆಕ್ಟ್ರಿಕ್ ತ್ರಿಚಕ್ರ ವಾಹನಗಳನ್ನು ಔರಾದ್‌ನಲ್ಲಿ ವಿತರಿಸಿದರು.
ಈ ವೇಳೆ ಮಾತನಾಡಿದ ಸಚಿವರು, ವಿಕಲಚೇತನರ ಸಂಚಾರಕ್ಕೆ ಅನುಕೂಲವಾಗುವಂತೆ ಸರ್ಕಾರ ತ್ರಿಚಕ್ರ ವಾಹನಗಳನ್ನು ವಿತರಿಸುತ್ತಿದೆ. ಇದರ ಸದುಪಯೋಗ ಪಡೆಯಬೇಕೆಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಯೋಜನಯೆಡಿ ಆಯ್ಕೆಯಾದ 20 ಫಲಾನುಭವಿಗಳಿಗೆ ದ್ವಿಚಕ್ರ ವಾಹನಗಳನ್ನು ವಿತರಿಸಿದರು, ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.