ಔರಾದ: ಚುನಾವಣೆ ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ಔರಾದ್ ಸಹಾಯಕ ನಿರ್ದೇಶಕರ ಕಚೇರಿಯ ಕೃಷಿ ಅಧಿಕಾರಿ ಭೀಮಸೇನ ಸಿಂಧೆ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಗೋವಿಂದರಡ್ಡಿ ಆದೇಶ ಹೊರಡಿಸಿದ್ದಾರೆ.
ನಾಗನಪಲ್ಲಿ (ತೆಲಂಗಾಣ ಗಡಿ)ಯಲ್ಲಿ ಸ್ಥಾಪಿಸಿದ ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯ ನಿರ್ವಹಿಸಲು ಸಿಂಧೆ ಅವರಿಗೆ ನೇಮಕ ಮಾಡಲಾಗಿತ್ತು. ಮಾ. 25ರಂದು ಅಲ್ಲಿಗೆ ಭೇಟಿ ನೀಡಿದ್ದಾಗ ಕರ್ತವ್ಯಕ್ಕೆ ಗೈರು ಹಾಜರಾಗಿದ್ದರು. ಹಿಂದಿನ ದಿವಸವೂ ಇರಲಿಲ್ಲ. ಡಿಸಿ ಕಚೇರಿ ಕಂಟ್ರೋಲ್ ರೂಮಿಗೆ ಸುಳ್ಳು ಮಾಹಿತಿ ಸಲ್ಲಿಸಿದ್ದಾರೆ. ಚುನಾವಣೆ ಕರ್ತವ್ಯಕ್ಕೆ ಗೈರು ಹಾಜರಾದ ಕಾರಣ ಇಲಾಖೆ ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.