ಔರಾದ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರಗಳಿಂದ ರಾಜ್ಯದಲ್ಲಿ ಜನರ ಕಲ್ಯಾಣಕ್ಕಾಗಿ ಹಲವಾರು ಯೊಜನೆಗಳನ್ನು ಜಾರಿಗೊಳಿಸಲಾಗಿದೆ. ಜನಪರ ಕೆಲಸ ಮಾದಿದ್ದೇವೆ. ಮುಂಬರುವ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು.ಬಿ ಚವ್ಹಾಣ ಅವರು ತಿಳಿಸಿದರು.
ಪಟ್ಟಣದಲ್ಲಿ ಮಾತನಾಡಿದ ಅವರು, ಪ್ರಸ್ತುತ ಸರ್ಕಾರ ಮಂಡಿಸಿರುವ ಬಜೆಟ್‌ನಲ್ಲಿ ಸರ್ವರ ಏಳಿಗೆಗೆ ಮಹತ್ವ ನೀಡಲಾಗಿದೆ. ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಜನರ ಬಳಿಗೆ ಹೋಗಲಿದ್ದೇವೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ 151 ಸ್ಥಾನಗಳಲ್ಲಿ ಜಯ ಸಾಧಿಸಲಿದ್ದು, ಬೀದರ ಜಿಲ್ಲೆಯ ಎಲ್ಲ 6 ಸ್ಥಾನಗಳಲ್ಲಿ ಬಿಜೆಪಿಯ ಅಭ್ಯರ್ಥಿಗಳು ಜಯ ಗಳಿಸಲಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ್, ತಾಲ್ಲೂಕು ಅಧ್ಯಕ್ಷಅಶೋಕ ವಕಾರೆ, ಶಾಸಕ ಶರಣು ಸಲಗರ, ವಿಧಾನ ಪರಿಷತ್ ಸದಸ್ಯ ರಘುನಾಥರಾವ ಮಲ್ಕಾಪೂರೆ, ಮಾಜಿ ಶಾಸಕ ಅಮರನಾಥ ಪಾಟೀಲ, ವಿಭಾಗ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ್, ಸಿದ್ದೇಶ, ಮುಖಂಡ ಶಿವರಾಜ ಗಂದಗೆ, ಸೂರ್ಯಕಾಂತ ಚಿಲ್ಲಾಬಟ್ಟೆ, ಅರವಿಂದ ಮುತ್ತೆ, ಪ್ರದೀಪ ವತಾಡೆ ಹಾಗೂ ಇತರರು ಉಪಸ್ಥಿತರಿದ್ದರು.