ಔರಾದ: ಔರಾದ(ಬಿ) ಎಸ್‌ಸಿ ವಿಸಲು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಪ್ರಭು ಚವ್ಹಾಣ್ ಭರ್ಜರಿ ಗೆಲವು ಸಾಧಿಸಿದ್ದಾರೆ. ಸತತ ನಾಲ್ಕನೇ ಬಾರಿ ಗೆಲುವು ಸಾಧಿಸಿದ ಪ್ರಭು ಚವ್ಹಾಣ್ ಕಾಂಗ್ರೆಸ್ ಅಭ್ಯರ್ಥಿ ಭೀಮಸೇನ ಸಿಂಧೆ ವಿರುದ್ಧ 9348 ಮತಗಳ ಅಂತರದಿಂದ ಪ್ರಭು ಚವ್ಹಾಣ್ ಬಾಂಡರಿ ಬಾರಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರಲ್ಲಿ ಹರ್ಷ:
ಭರ್ಜರಿ ಗೆಲುವು ಸಾಧಿಸ್ತಿದ್ದಂತೆ ಪಕ್ಷದ ಕಾರ್ಯಕರ್ತರ ಸಂಭ್ರಮ ಮುಗಿಲುಮುಟ್ಟಿದೆ. ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚಾರಣೆ ಮಾಡಿದರು.