ಔರಾದ್: ಔರಾದ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಡಾ. ಭೀಮಸೇನ್‌ರಾವ ಶಿಂಧೆ ಅವರು ಏ. 19ರಂದು ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ಪಟ್ಟಣದ ಅಮರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಂತರ ಬೆಳಗ್ಗೆ 10.30 ಗಂಟೆಗೆ ಎಪಿಎಮ್ ಸಿ ಬಳಿಯ ಕನ್ನಡಾಂಬೆ ವೃತ್ತದಿಂದ ಮಿನಿ ವಿಧಾನ ಸೌಧವರೆಗೆ ಮುಖ್ಯ ರಸ್ತೆಯಲ್ಲಿ ಬೃಹತ್ ಮೆರವಣಿಗೆ ಮೂಲಕ ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಯಲಿದೆ.
ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಮಾಜಿ ಸಚಿವರಾದ ರಾಜಶೇಖರ್ ಪಾಟೀಲ್, ರಹಿಂಖಾನ್, ಎಂಎಲ್ಸಿಗಳಾದ ಚಂದ್ರಶೇಖರ ಪಾಟೀಲ, ಭೀಮರಾವ ಪಾಟೀಲ್, ಅರವಿಂದ ಅರಳಿ, ಮಾಜಿ ಎಂಎಲ್ಸಿ ವಿಜಯಸಿಂಗ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಸವರಾಜ ಜಾಬಶೆಟ್ಟಿ, ಕಾಂಗ್ರೆಸ್ ಉಸ್ತುವಾರಿ ಶರಣು ಮೋದಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಕುಮಾರ ಹಲಬರ್ಗೆ, ಗ್ರಾಮೀಣ ಘಟಕ ಅಧ್ಯಕ್ಷ ಆನಂದ ಚವ್ಹಾಣ ಸೇರಿ ಜಿಲ್ಲೆಯ ಹಲವು ನಾಯಕರು, ಮುಖಂಡರು ಭಾಗಿಯಾಗಲಿದ್ದಾರೆ. ಕ್ಷೇತ್ರದ ಕಾರ್ಯಕರ್ತರು, ಮುಖಂಡರು, ಸ್ವಾಭಿಮಾನಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಡಾ. ಭೀಮಸೇನ್ ರಾವ ಶಿಂಧೆ ಮನವಿ ಮಾಡಿಕೊಂಡಿದ್ದಾರೆ.