ಔರಾದ: ಔರಾದ ಮೀಸಲು ವಿಧಾನಸಭಾ ಕ್ಷೇತ್ರದ ಕೈ ಟಿಕೆಟ್ ಡಾ.ಭೀಮಸೇನ್ ಶಿಂಧೆ ಸಿಕ್ಕ ಪ್ರಯುಕ್ತ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳು ಪಟಾಕಿ ಸಿಡಿಸಿ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.
ಔರಾದ ವಿಧಾನ ಮೀಸಲು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟಗಾಗಿ ಒಟ್ಟು 27 ಜನ ಆಕಾಂಕ್ಷಿಗಳ ಪಟ್ಟಿ ಹೈಕಮಾಂಡ್‌ನಲ್ಲಿ ಇತ್ತು. ಅಂತಿಮವಾಗಿ ಪ್ರಬಲ ಪೈಪೋಟಿ ನೀಡುವ ವ್ಯಕ್ತಿಗೆ ಟಿಕೆಟ್ ನೀಡಬೇಕು ಎಂದು ಒತ್ತಡಕ್ಕೆ ಮಣಿದು ಇಂದು ಡಾ. ಭೀಮಸೇನ ಶಿಂಧೆ ಅವರಿಗೆ ಕಾಂಗ್ರೆಸ್ ಟಿಕೆಟ್ ಲಭಿಸಿದೆ. ಅವರ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಔರಾದ ತಾಲೂಕಿನ ವಡಗಾಂವ ಗ್ರಾಮದ ಅಂಬೇಡ್ಕರ್ ವೃತ್ತದಲ್ಲಿ ಪಟಾಕಿ ಸಿಡಿಸಿ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.