News Karnataka
ರಾಜಕೀಯ

ಮಾಜಿ ಶಾಸಕ ಗುಂಡಪ್ಪ ವಕೀಲ ಬಿಜೆಪಿ ಸೇರ್ಪಡೆ

Former MLA Gundappa's Vakeel joins BJP
Photo Credit : Ravi Mathapati

ಔರಾದ: ಮಾಜಿ ಶಾಸಕಗುಂಡಪ್ಪ ವಕೀಲ ಮೆ 3ರಂದು ಔರಾದ(ಬಾ) ಪಟ್ಟಣದಲ್ಲಿ ನಡೆದ ಸಮಾವೇಶದಲ್ಲಿ ನಿಕಟಪೂರ್ವ ಮುಖ್ಯಮಂತ್ರಿಗಳು, ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯರು ಹಾಗೂ ಬಿಜೆಪಿ ಸ್ಟಾರ್ ಪ್ರಚಾರಕರಾದ ಬಿ.ಎಸ್ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.

ಇದೇ ವೇಳೆ ಪಟ್ಟಣ ಪಂಚಾಯತ್ ಸದಸ್ಯರಾದ ದಯಾನಂದ ಘೂಳೆ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರ್ಪಡೆಯಾದರು. ಬಿ.ಎಸ್ ಯಡಿಯೂರಪ್ಪ ಅವರು ಭಾರತೀಯ ಜನತಾ ಪಕ್ಷದ ಧ್ವಜವನ್ನು ನೀಡುವ ಮೂಲಕ ಸಾವಿರಾರು ಕಾರ್ಯಕರ್ತರೊಂದಿಗೆ ಸೇರ್ಪಡೆಯಾದ ಗುಂಡಪ್ಪ ವಕೀಲ ಮತ್ತು ದಯಾನಂದ ಘೂಳೆ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಪ್ರಭು.ಬಿ ಚವ್ಹಾಣ ಅವರನ್ನು ಪ್ರಚಂಡ ಮತಗಳ ಅಂತರದಿಂದ ಗೆಲ್ಲಿಸಿಕೊಂಡು ಬರಲು ಶ್ರಮಿಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ, ಸಚಿವ ಪ್ರಭು.ಬಿ ಚವ್ಹಾಣ, ವಸಂತ ಬಿರಾದಾರ, ಬಿಜೆಪಿ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ, ಮಂಡಲ ಅಧ್ಯಕ್ಷ ರಾಮಶೆಟ್ಟಿ ಪನ್ನಾಳೆ ಹಾಗೂ ಇತರರು ಉಪಸ್ಥಿತರಿದ್ದರು.

Ravi Mathapati

Read More Articles
MANY DROPS MAKE AN OCEAN
Support NewsKarnataka's quality independent journalism with a small contribution.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *