ಔರಾದ: ಮೀಸಲು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ಗೋಪಿಕೃಷ್ಣ ಅವರು ತಿಳಿಸಿದ್ದಾರೆ. ಸತತ 5 ವರ್ಷಗಳಿಂದ ಕ್ಷೇತ್ರದ ವಿವಿಧ ಹಳ್ಳಿಗಳಿಗೆ ಭೇಟಿ ನೀಡುವ ಮೂಲಕ ಜನರ ಕಷ್ಟ ಕಾರ್ಪಣ್ಯಗಳೊಂದಿಗೆ ಸ್ಪಂದಿಸುವ ಮೂಲಕ ಜನತೆಗೆ ಹತ್ತಿರವಾಗಿ ಪಕ್ಷದ ಪದಾಧಿಕಾರಿಗಳು ಹಾಗೂ ಕಾ ರ್ಯಕರ್ತರ ಜತೆಗೂಡಿ ಪಕ್ಷ ಸಂಘಟನೆ ಬಲವರ್ಧನೆಗೆ ಶ್ರ ಮಿಸುವ ಮೂಲಕ ಭಕ್ತಿ ನಿಷ್ಠೆಯಿಂದ ಕೆಲಸ ಮಾಡಿದ್ದೇನೆ. ಆದ್ದರಿಂದ ಪಕ್ಷದ ಅಭ್ಯರ್ಥಿ ಆಯ್ಕೆ ಬಗ್ಗೆ ಪಕ್ಷದ ವರಿಷ್ಠರ ಮೇಲೆ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.
ಕಳೆದ ಹದಿನೈದು ವರ್ಷಗಳ ಅವಧಿಯಲ್ಲಿ ಕ್ಷೇತ್ರದಲ್ಲಿ ಉದ್ಯೋಗವಿಲ್ಲದೆ ಯುವಕರು ಹಿರಿಯರು ನೆರೆ ರಾಜ್ಯಗಳ ಮೊರೆ ಹೋಗು ತ್ತಿದ್ದಾರೆ. ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಔರಾದ ಪಟ್ಟಣಕ್ಕೆ ಇವತ್ತಿಗೂ ಕೂಡ ಸಮರ್ಪಕವಾಗಿ ಶುದ್ಧ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ಪಟ್ಟಣದ ಜನತೆಗೆ ಕುಲಷಿತ ನೀರೇ ಗತಿಯಾಗಿದೆ. ಕಾಂಗ್ರೆಸ್ ಪರ ಜನರ ಒಲವಿದೆ. ಪಕ್ಷದ ವರಿಷ್ಠರ ಮೇಲೆ ನಂಬಿಕೆ ಇದೆ. ಕ್ಷೇತ್ರದಲ್ಲಿ ಜನರು ಬದಲಾವಣೆ ಬಯಸಿದ್ದಾರೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಪಕ್ಷದ ವರಿಷ್ಠರ ಮೇಲೆ ವಿಶ್ವಾಸವಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.