News Karnataka
ರಾಜಕೀಯ

ನೀತಿ ಸಂಹಿತೆ ಉಲ್ಲಂಘನೆ: ವಿಶೇಷ ಕರ್ತವ್ಯಾಧಿಕಾರಿಗೆ ನೋಟಿಸ್ ಜಾರಿ

Issues notice to officer on duty for violation of code of conduct
Photo Credit : Ravi Mathapati

ಔರಾದ: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಪ್ರಭು ಚವ್ಹಾಣ ವಿಶೇಷ ಕರ್ತವ್ಯ ಅಧಿಕಾರಿಗೆ ಚುನಾವಣೆ ಅಧಿ ಕಾರಿ ನೋಟಿಸ್‌ ಜಾರಿಗೊಳಿಸಿದ್ದಾರೆ.

ಸಚಿವ ಪ್ರಭು ಚವ್ಹಾಣ ವಿಶೇಷ ಕರ್ತವ್ಯ ಅಧಿಕಾರಿ ದೀಪಕ ಬಿರಾದಾರಗೆ ನೋಟಿಸ್‌ ಜಾರಿಗೊಳಿಸಿ ಲಿಖಿತ ಸಮಜಾಯಿಷಿ ನೀಡುವಂತೆ ಸೂಚನೆ ನೀಡಿದ್ದಾರೆ. ಇಲ್ಲವಾದಲ್ಲಿ ಪ್ರಜಾ ಪ್ರತಿನಿಧಿ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ಚುನಾವಣೆ ನೀತಿ ಸಂಹಿತೆ ಜಾರಿಯಾದ ಬಳಿಕವೂ ಸಚಿವರ ಪ್ರವಾಸ ಪಟ್ಟಿಯನ್ನು ಹೊರಡಿಸಿರುವುದು ಚುನಾವಣೆ ನೀತಿ ಸಂಹಿತೆಯ ಸ್ಪಷ್ಟ ಉಲಂಘನೆ. ಪ್ರವಾಸ ಪಟ್ಟಿಗೆ ಲೇಡರ್ ಹೆಡ್ ಬಳಸಲಾಗಿದೆ. ತಾವೊಬ್ಬ ಸರ್ಕಾರಿ ಅಧಿಕಾರಿಯಾಗಿ ಸಚಿವರ ಪ್ರವಾಸ ಪಟ್ಟಿ ಹೊರಡಿಸಿರುವುದು ಚುನಾವಣೆ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ತಿಳಿಸಲಾಗಿದೆ.

Ravi Mathapati

Read More Articles
MANY DROPS MAKE AN OCEAN
Support NewsKarnataka's quality independent journalism with a small contribution.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *