ಔರಾದ: ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾ ಸಹ ಸಂಚಾಲಕರಾಗಿ ಔರಾದ ತಾಲೂಕಿನ ಸುಧಾಕರ್ ಕೊಳ್ಳೂರ ಅವರನ್ನು ನೇಮಕ ಮಾಡಲಾಗಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹಾಗೂ ಬೀದರ್ ಜಿಲ್ಲಾಧ್ಯಕ್ಷರಾದ ಬಸವರಾಜ ಜಾಬಶೆಟ್ಟಿ ಆದೇಶದ ಮೇರೆಗೆ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾ ಸಹ ಸಂಚಾಲಕರಾಗಿ ಸುಧಾಕರ್ ಕೊಳ್ಳೂರ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಅಮೃತರಾವ ಚಿಮಕೋಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.