ಔರಾದ: 2023ರ ವಿಧಾನಸಭಾ ಚುನಾವಣೆಯಲ್ಲಿ ಔರಾದ(ಬಿ) ಕ್ಷೇತ್ರದಿಂದ ಸ್ಪರ್ಧಿಸಲು ಮತ್ತೊಮ್ಮೆ ಅವಕಾಶ ಮಾಡಿಕೊಟ್ಟ ಭಾರತೀಯ ಜನತಾ ಪಕ್ಷದ ವರಿಷ್ಠರು ಹಾಗೂ ರಾಜ್ಯ ನಾಯಕರಿಗೆ ಸಚಿವ ಪ್ರಭು.ಬಿ ಚವ್ಹಾಣ ಅವರು ಧನ್ಯವಾದ ಸಲ್ಲಿಸಿದ್ದಾರೆ.
ಬಿಜೆಪಿಯ ಎಲ್ಲ ಕಾರ್ಯಕರ್ತರು, ಮತದಾರ ಪ್ರಭುಗಳು ಹಾಗೂ ಔರಾದ ಕ್ಷೇತ್ರದ ಸಮಸ್ತ ನಾಗರಿಕರಿಗೂ ಧನ್ಯವಾದ ಸಲ್ಲಿಸಿದ್ದು, ನಿಮ್ಮ ಪ್ರೀತಿ, ವಿಶ್ವಾಸಕ್ಕೆ ಋಣಿಯಾಗಿದ್ದು, ನಿಮ್ಮೆಲ್ಲರ ಆಶೀರ್ವಾದವೇ ನನಗೆ ಶ್ರೀರಕ್ಷೆಯಾಗಿದೆ. ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಸೇವೆ ಮಾಡಲು ಅವಕಾಶ ನೀಡಬೇಕೆಂದು ಮನವಿ ಮಾಡಿದ್ದಾರೆ.