ಔರಾದ: ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮತ್ತು ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿವೆ. ಬಿಜೆಪಿಯಿಂದ ಮಾತ್ರ ಸರ್ವರ ಏಳಿಗೆ ಸಾಧ್ಯ ಎಂದು ಪಶು ಸಂಗೋಪನೆ ಸಚಿವ ಪ್ರಭು.ಬಿ ಚವ್ಹಾಣ ತಿಳಿಸಿದರು.
ಕಮಲನಗರ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಸಂಚರಿಸಿ ಕಾರ್ಯಕರ್ತರನ್ನು ಭೇಟಿ ಮಾಡಿ ಮಾತನಾಡಿದ ಅವರು, ಅಭಿವೃದ್ಧಿಯನ್ನೇ ಮೂಲ ಮಂತ್ರವನ್ನಾಗಿಸಿಕೊಂಡಿರುವ ಬಿಜೆಪಿ ನೇತೃತ್ವದ ಸರ್ಕಾರದಿಂದ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿವೆ. ಅನ್ನದಾತರಿಗೆ ನೆರವಾಗಲು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಜಾರಿಗೆ ತರಲಾಗಿದೆ. ರೈತರ ಮಕ್ಕಳು ಉನ್ನತ ವ್ಯಾಸಂಗ ಮಾಡಬೇಕೆನ್ನುವ ಉದ್ದೇಶದಿಂದ ರಾಜ್ಯದಲ್ಲಿ ಮುಖ್ಯಮಂತ್ರಿ ವಿದ್ಯಾನಿಧಿ ಯೋಜನೆಯನ್ನು ಜಾರಿಗೊಳಿಸಿರುವುದು ರೈತರ ಮೇಲಿನ ಕಾಳಜಿಯನ್ನು ತೋರಿಸುತ್ತದೆ ಎಂದರು.
ಗ್ರಾಮೀಣ ಭಾಗದ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಜಲ ಜೀವನ್ ಮಿಷನ್ ಯೋಜನೆಯನ್ನು ಜಾರಿಗೆ ತರಲಾಗಿದೆ. ಸಾಕಷ್ಟು ವರ್ಷಗಳಿಂದ ಕೇವಲ ಭರವಸೆಯಾಗಿ ಉಳಿದಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಿಸಲಾಗಿದೆ. ಇಂತಹ ಅನೇಕ ಯೋಜನೆಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ರಾಜ್ಯದಲ್ಲಿ ಜಾರಿಗೆ ತರಲಾಗಿದೆ ಎಂದು ಹೇಳಿದರು. ಅಭಿವೃದ್ಧಿ ವಿಷಯಗಳನ್ನಿಟ್ಟುಕೊಂಡು ಚುನಾವಣೆ ಎದುರಿಸುತ್ತಿರುವ ಬಿಜೆಪಿಗೆ ಅಭೂತಪೂರ್ವ ಜನಬೆಂಬಲ ಸಿಗುವ ವಿಶ್ವಾಸವಿದೆ. ರಾಜ್ಯದಲ್ಲಿ ಪುನಃ ಬಿಜೆಪಿ ನೇತೃತ್ವದ ಸರ್ಕಾರವನ್ನು ತರಲು ಕಾರ್ಯಕರ್ತರು ಶಕ್ತಿಮೀರಿ ಪ್ರಯತ್ನಿಸಬೇಕೆಂದು ತಿಳಿಸಿದರು.
ಕಮಲನಗರ ತಾಲ್ಲೂಕಿನ ಭಂಡಾರಕುಮಟಾ, ಕಿಶನ ತಾಂಡಾ, ಧೋಪರವಾಡಿ, ಸೇವಾದಾಸ ನಗರ, ಹಂದಿಕೇರಾ ತಾಂಡಾ. ಬೊಟ್ಕುಳ ತಾಂಡಾ, ಹಂದಿಕೇರಾ, ಚಿಮ್ಮೇಗಾಂವ, ಭವಾನಿ ನಗರ ತಾಂಡಾ, ಮಾಳೆಗಾಂವ, ಭೊಪಾಳಗಡ್, ಬೆಳಕುಣಿ(ಬಿ), ಭವಾನಿ ಬಿಜಲಹಾಂವ, ತೋರ್ಣಾ ವಾಡಿ, ತೋರ್ಣಾ, ಧನಸಿಂಗ್ ತಾಂಡಾ, ವಶಿರಾಮ ತಾಂಡಾ, ಚಂದರ ತಾಂಡಾ, ಮುಧೋಳ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಸಂಚರಿಸಿ ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ವಸಂತ ಬಿರಾದಾರ, ದೊಂಡಿಭಾ ನರೋಟೆ, ಪ್ರತೀಕ್ ಚವ್ಹಾಣ, ರಾಜು ಪೋಕಲವಾರ, ಸಚಿನ ರಾಠೋಡ, ಗಿರೀಶ ವಡೆಯರ, ಪ್ರದೀಪ ಪವಾರ, ಯೋಗೇಶ ಪಾಟೀಲ, ಅನೀಲ ಚಿಮ್ಮೆಗಾಂವ, ಶಿವಾಜಿರಾವ ಪಾಟೀಲ ಮುಂಗನಾಳ, ಅನೀಲ ವಾಡೆಕರ, ಸಚಿನ ಬಿರಾದಾರ ಹಾಗೂ ಇತರರು ಉಪಸ್ಥಿತರಿದ್ದರು.