ಔರಾದ: ಸಚಿವ ಪ್ರಭು.ಬಿ ಚವ್ಹಾಣ ಅವರ ಸಮ್ಮುಖದಲ್ಲಿ ಔರಾದ(ಬಿ) ಪಟ್ಟಣದಲ್ಲಿ ವಿವಿಧ ಪಕ್ಷಗಳ ಸುಮಾರು 100ಕ್ಕೂ ಹೆಚ್ಚು ಕಾರ್ಯಕರ್ತರು ಶನಿವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.
ಹೊಸದಾಗಿ ಸೇರ್ಪಡೆಯಾದ ಪ್ರಮುಖರನ್ನು ಸಚಿವರು ಬಿಜೆಪಿ ಪಕ್ಷದ ಶಾಲು ಹೊದಿಸಿ, ಧ್ವಜವನ್ನು ನೀಡುವ ಮೂಲಕ ಪಕ್ಷಕ್ಕೆ ಬರ ಮಾಡಿಕೊಂಡರು. ಹೆಳವ ಸಮಾಜದ ಪ್ರಮುಖರಾದ ನಾಗನಾಥ, ಅಶೋಕ, ಈಶ್ವರ, ಸುನೀಲ್, ಅಶೋಕ, ಚಿನ್ನಪ್ಪ, ಅಣ್ಣೆಪ್ಪ, ರಾಜಕುಮಾರ ಸೇರಿದಂತೆ ಅನೇಕರು ಬಿಜೆಪಿಗೆ ಸೇರ್ಪಡೆಯಾದರು.
ಔರಾದ(ಬಿ) ವಿಧಾನಸಭಾ ಕ್ಷೇತ್ರದಲ್ಲಿ ಸಚಿವ ಪ್ರಭು.ಬಿ ಚವ್ಹಾಣ ಅವರ ನೇತೃತ್ವದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿವೆ. ಸಚಿವರ ಅಭಿವೃದ್ಧಿ ಕೆಲಸಗಳಿಂದ ಪ್ರಭಾವಿತರಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದೇವೆ. ಪ್ರಭು ಚವ್ಹಾಣ ಅವರಿಂದ ಮಾತ್ರ ಕ್ಷೇತ್ರದ ಸಮಗ್ರ ಅಭಿವೃದ್ಧಿ ಸಾಧ್ಯವಿದೆ. ಹಾಗಾಗಿ ಪ್ರಸಕ್ತ ಚುನಾವಣೆಯಲ್ಲಿ ಸಚಿವರನ್ನು ಬೆಂಬಲಿಸಲು ನಿರ್ಧರಿಸಿದ್ದೇವೆ. ವಿಧಾನಸಭಾ ಚುನಾವಣೆಯಲ್ಲಿ ಅತೀ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸುತ್ತೇವೆ ಎಂದು ಭರವಸೆ ನೀಡಿದರು.
ಈ ವೇಳೆ ಸಚಿವರು ಮಾತನಾಡಿ, ಭಾರತೀಯ ಜನತಾ ಪಕ್ಷದವು ಕಾರ್ಯಕರ್ತರ ಪಕ್ಷವಾಗಿದೆ. ಅತ್ಯಂತ ಶಿಸ್ತಿನ ಪಕ್ಷ, ಇಲ್ಲಿ ಕಾರ್ಯಕರ್ತರಿಗೆ ಪ್ರಮುಖ ಸ್ಥಾನಮಾನವಿರುತ್ತದೆ. ಔರಾದ(ಬಿ) ಕ್ಷೇತ್ರದಲ್ಲಿ ಕಾರ್ಯಕರ್ತರು ಸಾಕಷ್ಟು ಕ್ರೀಯಾಶೀಲರಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಉತ್ಸಾಹವೇ ನನಗೆ ಶಕ್ತಿಯಾಗಿ ಕೆಲಸ ಮಾಡುತ್ತಿದೆ. ತಮ್ಮ ಶಕ್ತಿಯನ್ನು ಚುನಾವಣೆಯಲ್ಲಿ ತೋರಿಬೇಕಿದೆ ಎಂದು ಹೇಳಿದರು.