ಔರಾದ: ಪ್ರಜಾಧ್ವನಿ ಸಮಾವೇಶವನ್ನು ಪಟ್ಟಣದ ತಹಶೀಲ್ದಾರ ಕಚೇರಿ ಎದುರುಗಡೆ ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶಕ್ಕೆ ನಮ್ಮೆಲ್ಲರ ಹೆಮ್ಮೆಯ ನಾಯಕರು ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಔರಾದ ತಾಲೂಕಿಗೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಇಂದು ತಾಲೂಕಿನ ವಿವಿಧ ಗ್ರಾಮಗಳಿಗೆ ಡಾ. ಭೀಮಸೇನ ರಾವ್ ರಾವ್ ಸಿಂಧೆ ಭೇಟಿ ನೀಡಿದರು.
ನಂತರ ಮಾತನಾಡಿದ ಅವರು, ಪ್ರಜಾಧ್ವನಿ ಸಮಾವೇಶಕ್ಕೇ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿಬೇಕು. ವಿಶೇಷವಾಗಿ ಮಹಿಳೆಯರು, ತಾಲೂಕಿನ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಈ ಸಮಾವೇಶಕ್ಕೆ ಬಂದು ಯಶಸ್ವಿಗೊಳಿಸಿ ಎಂದು ಮನವಿ ಮಾಡಿಕೊಂಡರು.