ಔರಾದ: 2023ರ ಸಾರ್ವತ್ರಿಕ ವಿಧಾನ ಸಭೆ ಚುನಾವಣೆಗೆ ಔರಾದ(ಬಾ) ವಿಧಾನಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಏಪ್ರಿಲ್ 17ರಂದು ನಾಮಪತ್ರ ಸಲ್ಲಿಸುತ್ತಿದೇನೆ ಎಂದು ಪ್ರಭು .ಬಿ ಚವ್ಹಾಣ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಂದು ಬೆಳಗ್ಗೆ 10 ಗಂಟೆಗೆ ಔರಾದನ ಆರಾಧ್ಯದೈವ ಅಮರೇಶ್ವರ ದೇವಸ್ಥಾನದಲ್ಲಿ ಅಭಿಷೇಕ ಹಾಗೂ ವಿಶೇಷ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದು ಕ್ಷೇತ್ರದ ಜನತೆ ಹಾಗೂ ಅಭಿಮಾನಿಗಳೊಂದಿಗೆ ಪಟ್ಟಣದ ಎಪಿಎಂಸಿ ವೃತ್ತದಿಂದ ತಹಶೀಲ್ದಾರ ಕಛೇರಿವರೆಗೆ ಬೃಹತ್ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಲಾಗುವುದು. ಔರಾದ ಹಾಗೂ ಕಮಲನಗರ ತಾಲ್ಲೂಕುಗಳ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಆತ್ಮೀಯ ಮತದಾರ ಪ್ರಭುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಶೋಭೆಯನ್ನು ಹೆಚ್ಚಿಸಬೇಕು ಎಂದು ಕೋರಿದ್ದಾರೆ.