ಔರಾದ: ಬಿಜೆಪಿ ವಿಜಯ ಸಂಕಲ್ಪ ರಥಯಾತ್ರೆ ಮಾ. 4ರಂದು ಪಟ್ಟಣಕ್ಕೆ ಆಗಮಿಸಲಿದ್ದು, ಅದ್ದೂರಿ ಸ್ವಾಗತಿಸಲು ಸಕಲ ಸಿದ್ಧತೆ ಮಾಡಲಾಗಿದೆ ಎಂದು ಬಿಜೆಪಿ ಮಂಡಳ ಅಧ್ಯಕ್ಷ ರಾಮಶೆಟ್ಟಿ ಪನ್ನಳೆ ಹೇಳಿದರು.
ಪಟ್ಟಣದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಯಾತ್ರೆ ಬೆಳಗ್ಗೆ ಬರಲಿದ್ದು, ಪಟ್ಟಣದ ವಿವಿಧೆಡೆ ರೋಡ್ ಶೋ ನಡೆಯಲಿದೆ. ಈ ಯಾತ್ರೆಯಲ್ಲಿ ಕೇಂದ್ರ ಹಾಗೂ ರಾಜ್ಯದ ನಾಯಕರು ಪಾಲ್ಗೊಳ್ಳಲಿದ್ದಾರೆ. ಕ್ಷೇತ್ರದ ಶಾಸಕರು ಪಶು ಸಂಗೋಪನೆ ಸಚಿವ ಕ್ಷೇತ್ರದ ಅಭಿವೃದ್ಧಿಗಾಗಿ ಹತ್ತಾರು ಯೋಜನೆ ತಂದಿದ್ದಾರೆ. ಕೆಲವರು ಅವರ ವಿರುದ್ಧ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ ಆದರೆ ಮುಂಬರುವ ಚುನಾವಣೆಯಲ್ಲಿ ಮತ್ತೆ ಪ್ರಭು ಚೌವ್ಹಾಣ ಅವರಿಗೆ ಟಿಕೆಟ್ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಈ ಸಂದರ್ಭದಲ್ಲಿ ಖಂಡೋಬಾ ಕಂಟೆ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.