ಔರಾದ: ಸಚಿವ ಪ್ರಭು ಚೌವ್ಹಾಣ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಮುಖಂಡ ಸುಧಾಕರ ಕೊಳ್ಳುರ ಅವರು ಚುನಾವಣೆ ಅಧಿಕರಿಗೆ ದೂರು ಸಲ್ಲಿಸಿದರು.
ನಂತರ ಸುಧಾಕರ ಕೊಳ್ಳುರ ಮಾತನಾಡಿ, ಪಶು ಸಂಗೋಪನೆ ಸಚಿವ ಪ್ರಭು ಚೌವ್ಹಾಣ ಅವರು ಪದೇ ಪದೇ ನೀತಿ ಸಂಹಿತೆ ಉಲ್ಲಂಘನೆ ಮಾಡುತ್ತಿದ್ದಾರೆ. 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನಲೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೂಡ ಗ್ರಾಮ ಸಂಚಾರ ಮಾಡುವ ಸಂದರ್ಭದಲ್ಲಿ ಮಹಿಳೆಯರಿಗೆ ತನ್ನ ಕಾರ್ಯಕರ್ತನ ಮುಖಾಂತರ ಬಹಿರಂಗವಾಗಿ ಹಣ ಹಂಚುತ್ತಿರುವ ವಿಡಿಯೋ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹರದಾಡುತ್ತಿದೆ.
ಕೆಲ ದಿನಗಳ ಹಿಂದೆ ಅಸಂವಿಧಾನಿಕ ಪದಗಳನ್ನು ಬಳಸಿ ಚುನಾವಣೆಯಲ್ಲಿ ಶಾಂತಿ ಸುವ್ಯವಸ್ಥೆ ಹಾಳು ಮಾಡುವ ಪ್ರಚೋದನೆ ಕಾರಿ ಭಾಷಣ ಮಾಡಿರುವ ವಿಡಿಯೋ ಕೂಡ ನೋಡಿದ್ದೇವೆ. ಪದೇ ಪದೇ ಪ್ರಭು ಚೌವ್ಹಾಣ ಅವರು ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದರು ಕೂಡ ಚುನಾವಣಾ ಅಧಿಕಾರಿಗಳು ಮಾತ್ರ ಯಾವುದೇ ಕ್ರಮ ಕೈಗೊಳ್ಳದೆ ಇರುವುದು ಅನುಮಾನಕ್ಕೆ ಎಡೆ ಮಾಡಿಕೊಡುತ್ತದೆ. ಕೂಡಲೇ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಮುಖಂಡ ಸುಧಾಕರ್ ಕೊಳ್ಳುರ ಹೇಳಿದರು.
ಈ ಸಂದರ್ಭದಲ್ಲಿ ನಗರ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶಂಕು ನಿಸ್ಪತೆ, ಹರಿದೇವ ಸಂಗನಾಳ ಉಪಸ್ಥಿತರಿದ್ದರು.