ಔರಾದ: ಬೀದರ ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನಲೆ ಚುನಾವಣೆ ಪ್ರಚಾರದಲ್ಲಿ ಸಚಿವ ಪ್ರಭು ಚವ್ಹಾಣ ಅಸಂವಿಧಾನಿಕ ಪದ ಬಳಕೆ ಮಾಡಿದ್ದಾರೆ ಚುನಾವಣಾ ಅಧಿಕಾರಿ ನೋಟಿಸ್ ಜಾರಿಗೊಳಿಸಿದ್ದಾರೆ.
ಚವ್ಹಾಣ್ ಹೇಳಿಕೆಯು ಜಾತಿ ಜಾತಿಗಳ ನಡುವೆ ಕೋಮು ಗಲಭೆ, ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಸಂಭವವಿದೆ. ಸಾಮಾಜಿಕ ತಾಣಗಳಲ್ಲಿ ವಿಡಿಯೋ ತುಣುಕುಗಳು ಹರಿದಾಡುತ್ತಿವೆ. ನೋಟಿಸ್ ಜಾರಿ ಮಾಡಿದ 24 ಗಂಟೆಗಳಲ್ಲಿ ನೋಟಿಸ್ ಗೆ ಲಿಖಿತ ಸಮಜಾಯಿಷಿ ನೀಡಬೇಕು. ಇಲ್ಲದಿದ್ದರೆ ಪ್ರಜಾಪ್ರತಿನಿಧಿ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.