ಔರಾದ: ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ಅವರು ಮೇ 3ರಂದು ಔರಾದ(ಬಿ) ತಾಲ್ಲೂಕಿಗೆ ಆಗಮಿಸಲಿದ್ದಾರೆ ಎಂದು ಸಚಿವ ಪ್ರಭು.ಬಿ ಚವ್ಹಾಣ ತಿಳಿಸಿದ್ದಾರೆ.
ಅಂದು ಬೆಳಗ್ಗೆ 11 ಗಂಟೆಗೆ ಔರಾದ ಪಟ್ಟಣದ ತಹಶೀಲ್ದಾರ ಕಛೇರಿಯ ಎದುರುಗಡೆಯ ಮೈದಾನದಲ್ಲಿ ನಡೆಯುವ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಕ್ಷೇತ್ರದ ಜನತೆಯನ್ನು ಉದ್ದೇಶಿಸಿ ಮಾತನಾಡುವರು. ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.