ಔರಾದ: ಗ್ರಾಮೀಣ ಪ್ರದೇಶದಲ್ಲಿ ಸಮುದಾಯ ಇಂಗು ಗುಂಡಿ ನಿರ್ಮಾಣದಲ್ಲಿ ಸಾಧನೆ ಮಾಡಿದ ತಾಲ್ಲೂಕಿನ ಧುಪತಮಹಾಗಾಂವ್ ಗ್ರಾಮ ಪಂಚಾಯಿತಿ ಸದಸ್ಯೆ ಗೀತಾ ಪವಾರ್ ಅವರಿಗೆ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.
ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ನಡೆಯುವ ಕಾರ್ಯಕ್ರಮದಲ್ಲಿ ಗೀತಾ ಪವಾರ್ ಅವರಿಗೆ ರಾಷ್ಟ್ರಪತಿ ದ್ರೌಪತಿ ಮುರ್ಮು ಹಾಗೂ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್ ಅವರು ಸ್ವಚ್ಛಸುಜಲ್ ಶಕ್ತಿ ಸಮಾನ್-2023 ಪ್ರಶಸ್ತಿ ನೀಡಲಿದ್ದಾರೆ ಎಂದು ಗ್ರಾಪಂ ಅಧ್ಯಕ್ಷ ತಿಳಿಸಿದರು.